ಇಂಡಿಗೋ ಸಂಸ್ಥೆಗೆ 22.20 ಕೋಟಿ ರೂ. ದಂಡ ವಿಧಿಸಿದ ಡಿಜಿಸಿಎ

ನವದೆಹಲಿ: ವಿಮಾನಗಳ ಹಾರಾಟದಲ್ಲಿ ವ್ಯಾಪಕ ವಿಳಂಬ ಮತ್ತು ರದ್ದತಿಯಿಂದ ಪ್ರಯಾಣಿಕರಿಗೆ ಉಂಟಾದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ವಿಮಾನಯಾನ ನಿಯಂತ್ರಕ ಸಂಸ್ಥೆ (DGCA), ಇಂಡಿಗೋ (IndiGo) ಏರ್‌ಲೈನ್ಸ್‌ಗೆ 22.20 ಕೋಟಿ ರೂಪಾಯಿ ಭಾರಿ ದಂಡ ವಿಧಿಸಿದೆ.
ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನಡೆಸಿದ ಸುದೀರ್ಘ ತನಿಖೆಯಲ್ಲಿ ಇಂಡಿಗೋ ಸಂಸ್ಥೆಯ ಹಲವು ಲೋಪದೋಷಗಳು ಬೆಳಕಿಗೆ ಬಂದಿವೆ.
ಸಿಬ್ಬಂದಿ ನಿರ್ವಹಣೆಯಲ್ಲಿ ವೈಫಲ್ಯ
ಸಿಬ್ಬಂದಿ ವೇಳಾಪಟ್ಟಿಯನ್ನು (Roster) ಸಂಪನ್ಮೂಲವನ್ನು ಅತಿಯಾಗಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ರೂಪಿಸಲಾಗಿತ್ತು. ಇದರಿಂದ ತುರ್ತು ಸಂದರ್ಭಗಳಲ್ಲಿ ವಿಮಾನ ಹಾರಾಟ ನಿರ್ವಹಿಸಲು ಸಿಬ್ಬಂದಿ ಕೊರತೆ ಉಂಟಾಗಿದೆ.

ಅಸಮರ್ಪಕ ಯೋಜನೆ ಮತ್ತು ದುರ್ಬಲ ಬಿಕ್ಕಟ್ಟು ನಿರ್ವಹಣೆಯಿಂದಾಗಿ ದೇಶಾದ್ಯಂತ ಹತ್ತಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದ್ದರು.
ಸಿಬ್ಬಂದಿ ಕರ್ತವ್ಯದ ಅವಧಿಯನ್ನು ವಿಸ್ತರಿಸುವುದು, ವಿಶ್ರಾಂತಿಯ ಅವಧಿಯನ್ನು ಕಡಿತಗೊಳಿಸುವುದು ಮತ್ತು ಸಂಪನ್ಮೂಲಗಳನ್ನು ಅತಿಯಾಗಿ ಬಳಸಿಕೊಳ್ಳುವ ಮೂಲಕ ಕಾರ್ಯನಿರ್ವಹಣಾ ಸಾಮರ್ಥ್ಯವನ್ನು ಕುಂಠಿತಗೊಳಿಸಲಾಗಿತ್ತು ಎಂದು ತನಿಖಾ ಸಮಿತಿ ವರದಿ ನೀಡಿದೆ.
ವಿಮಾನಯಾನ ಸಂಸ್ಥೆಯು ಕೇವಲ ಲಾಭ ಮತ್ತು ಸಂಪನ್ಮೂಲಗಳ ಬಳಕೆಯ ಮೇಲೆ ಗಮನಹರಿಸಿ, ಕಾರ್ಯಾಚರಣೆಯ ಸುರಕ್ಷಿತ ಅಂತರವನ್ನು (Operational buffer margins) ಕಡಿಮೆ ಮಾಡಿದೆ ಎಂದು ಡಿಜಿಸಿಎ ತನ್ನ ಆದೇಶದಲ್ಲಿ ತಿಳಿಸಿದೆ. ಈ ಕ್ರಮವು ವಿಮಾನಯಾನ ನಿಯಮಗಳ ಉಲ್ಲಂಘನೆಯಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಲು ಈ ದಂಡ ವಿಧಿಸಲಾಗಿದೆ.

ಪ್ರಮುಖ ಸುದ್ದಿ :-   ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement