ಬೆಳಗಾವಿ : ಮಾಜಿ ಸಚಿವ, ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಪಕ್ಷ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ.
ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿ ಎನ್.ಬಿ. ಬನ್ನೂರ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರನ್ನು ಹಿಂದಿಕ್ಕಿರುವ ಪ್ರಕಾಶ ಹುಕ್ಕೇರಿ ಅವರು ಕೊನೆಗೂ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ದೆಹಲಿಯಲ್ಲಿ ಗುರುವಾರ ಎಐಸಿಸಿ ಪ್ರಧಾನ ಕಾಯದರ್ಶಿ ಮುಕುಲ್ ವಾಸ್ನಿಕ್ ಅವರು ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯನ್ನಾಗಿ ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಹಾಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ