ಹುಬ್ಬಳ್ಳಿ ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗ್ಸ್ ಸೋಂಕಿತರಿಗೆ ಚಿಕಿತ್ಸೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ  ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಮಾಹಿತಿ ನೀಡಿರುವ ಅವರು, ಮೇ 24ರ ವರೆಗೆ ನಮ್ಮ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ.
ಈಗ (ಮೇ 26)  ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 20 ಜನ ಸೇರಿದಂತೆ ಇತರ ಜಿಲ್ಲೆಗಳಿಂದ ಸೇರಿ ಒಟ್ಟು 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

ನಿಮ್ಮ ಕಾಮೆಂಟ್ ಬರೆಯಿರಿ

advertisement