ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿಯ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಒಂದೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 12, 13 ಹಾಗೂ ಆಗಸ್ಟ್ 14 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಆಗಸ್ಟ್ 15 ಹಾಗೂ 16 ರಂದು ಕರಾವಳಿಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡುನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement