ಮಂಗಳೂರು ಪಾಲಿಕೆ: ಜಯಾನಂದ ಅಂಚನ್ ನೂತನ ಮೇಯರ್, ಪೂರ್ಣಿಮಾ ಉಪಮೇಯರ್‌

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ 23ನೇ  ಮೇಯರ್‌ ಆಗಿ ಬಿಜೆಪಿ ಹಿರಿಯ ಸದಸ್ಯರಾದ ಜಯಾನಂದ ಅಂಚನ್ ಹಾಗೂ ಉಪಮೇಯರ್‌ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಇಂದು (ಸೆಪ್ಟಂಬರ್‌ 9) ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಿತು.
ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಪ್ರಕಟಿಸಿದರು. ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು. ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಪಾಲ್ಗೊಂಡಿದ್ದರು.

ಇಂದು ನಡೆದ ಮೇಯರ್ ಚುನಾವಣೆಲ್ಲಿ ಕದ್ರಿ ಬಿ.ವಾರ್ಡ್ ನ ಪಾಲಿಕೆ ಸದಸ್ಯರಾಗಿರುವ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಸೆಂಟ್ರಲ್ ವಾರ್ಡ್ ನ ಪೂರ್ಣಿಮಾ ಆಯ್ಕೆಯಾದರು.
ಕಳೆದ ಸಾಲಿನಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಗಳಾದೇವಿ ವಾರ್ಡ್ ನ ಸದಸ್ಯ ಪ್ರೇಮಾನಂದ ಶೆಟ್ಟಿ ಮೇಯರ್ ಆಗಿದ್ದರು. ಹಾಗಾಗಿ ಈ ಬಾರಿ ಬಿಜೆಪಿ ಈ ಸಲ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸದಸ್ಯರಿಗೆ ಮೇಯರ್ ಹುದ್ದೆ ನೀಡಿದೆ. ಕಳೆದ ಸಲ ಬಂಟ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿದ್ದ ಬಿಜೆಪಿ ಈ ಬಾರಿ ಬಿಲ್ಲವ ಸಮುದಾಯದವರಿಗೆ ನೀಡಿದೆ.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement