ನವದೆಹಲಿ: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್ನಲ್ಲಿ ಭಾರತದ T20 ವಿಶ್ವಕಪ್ ವಿಜಯದ ನಂತರ ಸ್ಟಾರ್ ಬ್ಯಾಟರಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಸ್ವರೂಪದಿಂದ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ ಜಡೇಜಾ ಸಹ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂ(Instagram)ನಲ್ಲಿ ಅವರು ತಮ್ಮ ನಿವೃತ್ತಿ ಪ್ರಕಟಿಸಿದ್ದಾರೆ.
“ಹೃದಯಪೂರ್ವಕ ಕೃತಜ್ಞತೆಯೊಂದಿಗೆ, ನಾನು T20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಕ್ರಿಕೆಟಿನ ಇತರ ಸ್ವರೂಪಗಳಲ್ಲಿ ಅದನ್ನು ಮುಂದುವರಿಸುತ್ತೇನೆ. T20 ವಿಶ್ವಕಪ್ ಗೆಲ್ಲುವುದು ಕನಸು ನನಸಾಗಿತ್ತು, ನನ್ನ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಪರಾಕಾಷ್ಠೆ, ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕೆ ಧನ್ಯವಾದಗಳು” ಎಂದು ಅವರು ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ.
ವಿಶ್ವದ ಅತ್ಯುತ್ತಮ ಫೀಲ್ಡರ್ಗಳಲ್ಲಿ ಒಬ್ಬರಾದ ಜಡೇಜಾ ಅವರು ಏಕದಿನ ಮತ್ತು ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. 2009ರಲ್ಲಿ ಶ್ರೀಲಂಕಾ ವಿರುದ್ಧ ಟಿ20ಗೆ ಪಾದಾರ್ಪಣೆ ಮಾಡಿದ ಅವರು 74 ಪಂದ್ಯಗಳನ್ನು ಆಡಿದ್ದು, 515 ರನ್ ಗಳಿಸಿ 54 ವಿಕೆಟ್ ಪಡೆದಿದ್ದಾರೆ.
ಶನಿವಾರ ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ ಪ್ರಶಸ್ತಿ ಹಣಾಹಣಿಯಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸಿ ಟೂರ್ನಿಯ ಇತಿಹಾಸದಲ್ಲಿ ಎರಡನೇ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ವಿಜಯೋತ್ಸವದ ನಂತರ ರೋಹಿತ್ ಮತ್ತು ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರು. .
ನಿಮ್ಮ ಕಾಮೆಂಟ್ ಬರೆಯಿರಿ