ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಮಳೆ ಅಡ್ಡಿ: ಒಂದು ವಾರ ಮುಂದೂಡಿಕೆ

ಕೋಲಾರ: ಕರ್ನಾಟಕ ರಾಜ್ಯೋತ್ಸವ ದಿನದಂದಲೇ ಪಂಚರತ್ನ ರಥಯಾತ್ರೆ ಚಾಲನೆ ನೀಡಲು ಸಿದ್ಧತೆ ನಡೆಸಿದ್ದ ಜೆಡಿಎಸ್‌ಗೆ ಮಳೆರಾಯ ಅಡ್ಡಿ ಪಡಿಸಿದ್ದಾನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲಿನ (mulabagilu) ಕುರುಡುಮಲೆಯಿಂದ ಮಂಗಳವಾರ ಆರಂಭವಾಗಬೇಕಿದ್ದ ಯಾತ್ರೆಯನ್ನು ಮಳೆಯ ಕಾರಣದಿಂದ ವಾರ ಕಾಲ ಮುಂದೂಡಲಾಗಿದೆ.
ಪಂಚರತ್ನ ಸಮಾವೇಶಕ್ಕೆ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಾಲಾಜಿ ಭವನದ ಹತ್ತಿರ ಸುಮಾರು 32 ಎಕರೆ ಜಮೀನು ಪ್ರದೇಶದಲ್ಲಿ ಪಂಚರತ್ನ ಸಿದ್ಧತೆ ಮಾಡಲಾಗಿತ್ತು. ಮಧ್ಯಾಹ್ನ 3 ಗಂಟೆಗೆ ಸಮಾವೇಶ ನಿಗದಿಯಾಗಿತ್ತು. ಸಾವಿರಾರು ಜನರಿಗೆ ಆಸನ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಮಂಗಳವಾರ ಬೆಳಿಗ್ಗೆ ದಿಢೀರ್‌ ಮಳೆಯಿಂದಾಗಿ ಕಾರ್ಯಕ್ರಮ ನಡೆಯುವ ಸ್ಥಳ ಕೆಸರು ಗದ್ದೆಯಾದಂತಾಗಿದೆ. .

ಬೆಳಿಗ್ಗೆ ಕುರುಡುಮಲೆಯ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿತ್ತು. ಹವಾಮಾನ ವರದಿಯಂತೆ ಇನ್ನೂ ನಾಲ್ಕೈದು ದಿನ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹಾಗೂ ಸುರಿದ ಭಾರೀ ಮಳೆಯಿಂದಾಗಿ ಪಂಚರತ್ನ ರಥಯಾತ್ರೆಯನ್ನು ತಾತ್ಕಾಲಿಕವಾಗಿ ಒಂದು ವಾರದ ಮಟ್ಟಿಗೆ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಳೆಯ ಮುನ್ಸೂಚನೆ ನೋಡಿಕೊಂಡು ಕಾರ್ಯಕ್ರಮ ನಿಗದಿ ಮಾಡಲಾಗುತ್ತದೆ. ಇಲ್ಲಿಂದಲೇ ಪಂಚರತ್ನ ಕಾರ್ಯಕ್ರಮ ಆರಂಭಿಸಲಾಗುತ್ತದೆ ಈ ಸಭೆಯಲ್ಲಿ ನಮ್ಮ ಮುಖಂಡರು ಮತ್ತು ಶಾಸಕರಿಗೆ ಪ್ರಮಾಣ ಮಾಡಿಸುವ ಕಾರ್ಯವೂ ಇತ್ತು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement