ಪರಿಷತ್‌ ಸದಸ್ಯರಿಗೆ ಅವಧಿ ಮೀರಿದ ಮಾಸ್ಕ್ ವಿತರಣೆ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಭಾಪತಿ ಹೊರಟ್ಟಿ ಸೂಚನೆ

ಬೆಂಗಳೂರು: ಅವಧಿ ಮೀರಿದ ಮಾಸ್ಕ್ ವಿತರಿಸಿದ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿ ಬಸವರಾಜಹೊರಟ್ಟಿ ಸರ್ಕಾರಕ್ಕೆ ವಿಧಾನಪರಿಷತ್‌ನಲ್ಲಿ ಇಮದು (ಶುಕ್ರವಾರ) ಸೂಚಿಸಿದ್ದಾರೆ.
ಒಂದು ವರ್ಷದ ಅವಧಿ ಮೀರಿದ ಮಾಸ್ಕ್‌ಗೆ ಎರಡು ವರ್ಷದ ಸ್ಟಿಕರ್ ಅಂಟಿಸಿ ನೀಡಿರುವ ಸಂಬಂಧ ಆರೋಗ್ಯ ಇಲಾಖೆಯ ಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಬೇಕು. ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾನಾಯಕರೂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರಿಗೆ ಸೂಚನೆ ನೀಡಿದರು.
ನಿನ್ನೆ ಪ್ರಶ್ನೋತ್ತರ ಕಲಾಪದಲ್ಲಿ ಅವಧಿ ಮೀರಿದ ಮಾಸ್ಕ್ ವಿಧಾನಪರಿಷತ್ ಸದಸ್ಯರಿಗೆ ವಿತರಿಸಿದ ಸಂಬಂಧ ವಿಷಯ ಪ್ರಸ್ತಾಪ ಮಾಡಿದ್ದ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್, ಇದೊಂದು ಗಂಭೀರವಾದ ವಿಷಯ. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಸಭಾಪತಿಗಳ ಗಮನಕ್ಕೆ ತಂದಿದ್ದರು.
ಇಂದು ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪ್ರಸ್ತಾಪಿಸಿದ ಸಭಾಪತಿ ಬಸವರಾಜಹೊರಟ್ಟಿ, ಚೀನಾ ಹೆಸರಿರುವ ಮಾಸ್ಕ್ ಒಂದು ವರ್ಷ ಪೂರ್ಣಗೊಂಡಿದೆ. ಅದರ ಮೇಲೆ ೨ ವರ್ಷದ ಅವಧಿಯ ಸ್ಟಿಕರ್ ಹಾಕಿ ನೀಡುವ ಮೂಲಕ ಲೋಪವೆಸಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಇದಕ್ಕೆ ಸಭಾನಾಯಕ ಕೋಟಾಶ್ರೀನಿವಾಸಪೂಜಾರಿ, ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವುದಾಗಿ ಹೇಳಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement