ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ದಿನಾಂಕ ಪ್ರಕಟವಾಗಿದೆ.
ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21ರಂದು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯು ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ಸೇರಿ ಒಟ್ಟು ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಪಿಯುಸಿ ತೇರ್ಗಡೆಯ ನಂತರ ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕು. ಮಾರ್ಚ್ 9 ರಿಂದ ಮಾರ್ಚ್ 29ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement