ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಇಂದು(ಶುಕ್ರವಾರ) ನಡೆಯುತ್ತಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 1,652 ಅಭ್ಯರ್ಥಿಗಳು ಕಣದಲ್ಲಿದ್ದು, 16.63 ಕೋಟಿ ಮತದಾಋರು ತಮ್ಮ ಮತದ ಹಕ್ಕನ್ನು ಚಲಾಯಿಸಲಿದ್ದಾರೆ.
ತಮಿಳುನಾಡು – 39, ರಾಜಸ್ಥಾನದ -12, ಉ.ಪ್ರದೇಶದ -8, ಮಧ್ಯ ಪ್ರದೇಶ -6, ಉತ್ತರಾಖಂಡ -5, ಮಹಾರಾಷ್ಟ್ರ -5, ಅಸ್ಸಾಂನ -5, ಬಿಹಾರದ -4 , ಪಶ್ಚಿಮ ಬಂಗಾಳ- 3, ಮಣಿಪುರ -2, ಅರುಣಾಚಲ ಪ್ರದೇಶ -2 , ಮೇಘಾಲಯ -2, ಪುದುಚೆರಿ, ಛತ್ತೀಸ್‌ಘಡ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದಲ್ಲಿ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ಸುಗಮವಾಗಿ ನಡೆಸಲು ಮತದಾನ ಕೇಂದ್ರಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಅರ್ಧಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್‌ಗಳ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತದ ಮತದಾನಕ್ಕೆ ಇಸಿ 361 ವೀಕ್ಷಕರನ್ನು ನೇಮಿಸಿದೆ.

ಪ್ರಮುಖ ಸುದ್ದಿ :-   1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement