ಕಲಬುರಗಿಯಲ್ಲಿ ತೊಗರಿ ಪಾರ್ಕ್‌ ಸ್ಥಾಪನೆ ಖಚಿತ

ಯಾದಗಿರಿ : ಇಡೀ ರಾಜ್ಯದಲ್ಲಿಯೇ ಕಲ್ಯಾಣ ಕರ್ನಾಟಕದಲ್ಲಿ ಅತೀ ಹೆಚ್ಚು ರೈತರು ತೊಗರಿ ಬೆಳೆ ಬೆಳೆಯುತ್ತಾರೆ. ಅವರಿಗೆ ಸರ್ಕಾರದಿಂದ ಸೂಕ್ತ ನ್ಯಾಯ ಒದಗಿಸುವ ಮೂಲಕ ಅವರ ಆರ್ಥಿಕ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ನಾಲವಾರ ಹೇಳಿದರು.
ಮಸ್ಕಿ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ತಮ್ಮ ಜನ್ಮ ದಿನದ ನಿಮಿತ್ತ ಅಭಿಮಾನಿಗಳಿಂದ ಸನ್ಮಾನ ಸ್ವಿಕರಿಸಿ ಮಾತನಾಡಿದರು.
ಈ ವರ್ಷ ಬೇರೆ ದೇಶಗಳಿಂದ ನಾಡಿಗೆ ತೊಗರಿ ಬೆಳೆ ಬಹಳ ಕಡಿಮೆ ಪ್ರಮಾಣದಲ್ಲಿ ಬಂದಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ತೊಗರಿ ಬೆಳೆಗೆ ಉತ್ತಮ ಬೆಲೆಯಿದ್ದು, ಪ್ರತಿ ಕ್ವಿಂಟಲ್‌ಗೆ 6800 ರಿಂದ 7000 ಇದೆ. ಪರಿಣಾಮ ಸರ್ಕಾರದಿಂದ ರೈತರ ತೊಗರಿ ಖರೀದಿ ಮಾಡುವ ಪ್ರಶ್ನೆ ಉದ್ಭವಿಸಿಲ್ಲ ಎಂದು ತಿಳಿಸಿದರು.
ಕಲಬುರಗಿಯಲ್ಲಿ ರೈತರ ಹಾಗೂ ವ್ಯಾಪಾರಸ್ಥರ ದೃಷ್ಟಿಯಿಂದ ತೊಗರಿ ಪಾರ್ಕ್ ಸ್ಥಾಪನೆ ಮಾಡಬೇಕೆಂದು ಸರ್ಕಾರದ ಮುಂದೆ ಬೇಡಿಕೆ ಇಡಲಾಗಿದೆ. ಮುಖ್ಯಮಂತ್ರಿಗಳನ್ನು ನಾನು ಕಲ್ಯಾಣ ಕರ್ನಾಟಕದ ಶಾಸಕರೊಂದಿಗೆ ಹಾಗೂ ವ್ಯಾಪಾರಸ್ಥರ ನಿಯೋಗದೊಂದಿಗೆ ಭೇಟಿ ಮಾಡಿ ತೊಗರಿ ಪಾರ್ಕ್ ಸ್ಥಾಪನೆ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈ ಬಜೆಟ್‌ನಲ್ಲಿ ನೀಡದಿದ್ದರೂ ಬರುವ ದಿನಗಳಲ್ಲಿ ನಮ್ಮ ಬೇಡಿಕೆ ಈಡೇರುವ ಸಾಧ್ಯತೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೆ ಬಸವಕಲ್ಯಾಣ ಮತ್ತು ಮಸ್ಕಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತವಾಗಿದ್ದು, ತಾವು ಸಹ ಮಸ್ಕಿಯಲ್ಲಿ ಪ್ರಚಾರಕ್ಕೆ ತೆರಳುತ್ತಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಶ್ವನಾಥ ಸ್ವಾಮೀಜಿ, ಕಲಬುರಿಗಿ ಜಿ.ಪಂ ಸದಸ್ಯ ಅರವಿಂದ ಚವ್ಹಾಣ, ಭೀಮರೆಡ್ಡಿ ಗೌಡ ಕುರಾಳ, ಶರಣಗೌಡ ಗೋಗಿ, ವೆಂಕಟರೆಡ್ಡಿ ಹತ್ತಿಕುಣಿ, ಅಭಿಲಾಷ ಪಾಟೀಲ್ ನಾಲವಾರ, ರವಿ ಕೆ. ಮುದ್ನಾಳ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement