ಉತ್ತರ ಪ್ರದೇಶ: ೧ರಿಂದ ೮ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಎಲ್ಲ ವಿದ್ಯಾರ್ಥಿಗಳ ತೇರ್ಗಡೆ

ಲಕ್ನೋ: ಕೊರೊನಾ ಕಾರಣದಿಂದ ೧ ರಿಂದ ೮ನೇ ತರಗತಿವರೆಗಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
9 ಮತ್ತು 11 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ವಾರ್ಷಿಕ ಪರೀಕ್ಷೆಗಳಲ್ಲಿ ಹಾಜರಾಗಬೇಕಾಗುತ್ತದೆ. ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಗಳಿಗೆ ಯುಪಿ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಈಗಾಗಲೇ ಘೋಷಿಸಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗ ಹರಡಿದ ಕಾರಣ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದ ತರಗತಿಗಳನ್ನು ಕಳೆದ ಮಾರ್ಚ್‌ನಲ್ಲಿ ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿಯ ನಿರ್ದೇಶನದ ನಂತರ, ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣ ಮಂಡಳಿಗಳು 2020-2021ರ ೧ ರಿಂದ ೮ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಘೋಷಿಸಿವೆ. ಅವರ ಹಿಂದಿನ ಸಾಧನೆ ಮತ್ತು ಅವರ ತರಗತಿ ಚಟುವಟಿಕೆಗಳ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುವುದು ಎಂದು ತಿಳಿಸಲಾಗಿದೆ. ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದ ವಿದ್ಯಾರ್ಥಿಗಳ ಪೋಷಕರು ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement