ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ನವದೆಹಲಿ : ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಹಾಗೂ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಪೀಠ ತಡೆ ನೀಡಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ನ್ಯಾಯಾಲಯ, ಪ್ರಕರಣವನ್ನು ಹೈಕೋರ್ಟ್‌ಗೆ ವಹಿಸಲಷ್ಟೇ ತಾನು ತಡೆ ನೀಡುತ್ತಿರುವುದಾಗಿ ತಿಳಿಸಿತು.
ಯಡಿಯೂರಪ್ಪ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ , ಹೈಕೋರ್ಟ್ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ ಎಂದು ವಾದಿಸಿದರು. ” ಪ್ರಾಸಿಕ್ಯೂಷನ್ ತಿಳಿಸದೆ ಇರುವ ಕೆಲವು ಹೇಳಿಕೆಗಳಿವೆ. ಕೃತ್ಯ ನಡೆದಿಲ್ಲ ಎಂದು ಹೇಳುವ ಸಾಕ್ಷ್ಯಗಳಿವೆ ಎಂಬ ಸಂಗತಿಯನ್ನು ಹೈಕೋರ್ಟ್ ನಿರ್ಲಕ್ಷಿಸಿದೆ. ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು” ಎಂದು ಲೂತ್ರಾ ನ್ಯಾಯಾಲಯಕ್ಕೆ ತಿಳಿಸಿದರು.

ಸಹಾಯ ಕೋರಿ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದ ವೇಳೆ ತನ್ನ 17 ವರ್ಷದ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.
ಬಾಲಕಿಯ ತಾಯಿ ಮಾರ್ಚ್ 14, 2024ರಂದು ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದರು. ಮಾಜಿ ಮುಖ್ಯಮಂತ್ರಿ ಹಣ ನೀಡುವ ಮೂಲಕ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಪ್ರಸ್ತುತ ಬಾಲಕಿ ತಾಯಿ ಮೃತ ಪಟ್ಟಿದ್ದಾರೆ.
ಈ ದೂರಿನ ಆಧಾರದ ಮೇಲೆ, ಪೊಲೀಸರು ಪೋಕ್ಸೊ ಕಾಯಿದೆಯ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354 (ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement