ಪೋಕ್ಸೋ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮುರುಘಾ ಶರಣರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜಾಮೀನು ಕೋರಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಜಾಮೀನು ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರು ಇಬ್ಬರು ಅಪ್ರಾಪ್ತರ ಜೊತೆಗೆ ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ನೋಟಿಸ್‌ ನೀಡಲು ಆದೇಶಿಸಿದರು.
ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ 64 ವರ್ಷದ ಶ್ರೀಗಳು ಕೆಳ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಹಾಸ್ಟೆಲ್‌ನ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ಮುರುಘಾ ಶರಣರು ವಿಚಾರಣೆ ಎದುರಿಸುತ್ತಿದ್ದಾರೆ.
ಶರಣರು ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಹೊಸ ದೂರಿನ ಮೇರೆಗೆ ಶರಣರು ವಿರುದ್ಧ ಪೋಕ್ಸೋ ಕಾಯ್ದೆಯಡಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೊಸ ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮೈಸೂರಿನಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಪ್ರಭಾವಿ ಲಿಂಗಾಯತ ಮಠದ ಮಠಾಧೀಶರನ್ನು ಬಂಧಿಸಲಾಯಿತು.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement