ವಿಧಾನ ಪರಿಷತ್ ಚುನಾವಣೆ: ಮೂವರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಒಂದು ಕ್ಷೇತ್ರಕ್ಕೆ ಹೆಸರು ಪ್ರಕಟಿಸದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂವರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ವಾಯವ್ಯ ಶಿಕ್ಷಕರ ಕ್ಷೇತ್ರ- ಅರುಣ್ ಶಹಾಪುರ (ಹಾಲಿ ಸದಸ್ಯ), ವಾಯವ್ಯ ಪದವೀಧರ ಕ್ಷೇತ್ರ – ಹನುಮಂತ ನಿರಾಣಿ (ಹಾಲಿ ಸದಸ್ಯ)ದಕ್ಷಿಣ ಪದವೀಧರ ಕ್ಷೇತ್ರ -ಎಂ.ವಿ.ರವಿಶಂಕರ್ ಅವರ ಹೆಸರನ್ನು ಬಿಡುಗಡೆ ಮಾಡಿದೆ.

ಗೋ.ಮಧುಸೂದನ ಅವರಿಗೆ ಈ ಬಾರಿಯೂ ಟಿಕೆಟ್ ನೀಡಿಲ್ಲ. ಬಿಜೆಪಿ ಹೈಕಮಾಂಡ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯನ್ನು ಬಿಜೆಪಿಗೆ ಕರೆತರಲು ಬಿಜೆಪಿ ನಾಯಕರು ಕಸರತ್ತು ನಡೆಯುತ್ತಿದೆ ಎನ್ನುವ ಊಹಾಪೋಹದ ಮಧ್ಯೆಯೇ ರಾಜ್ಯ ಬಿಜೆಪಿ ಮೋಹನ್ ಲಿಂಬೆಕಾಯಿ ಹೆಸರು ಕಳುಹಿಸಿದೆ ಎನ್ನಲಾಗಿದ್ದರೂ ಬಿಜೆಪಿ ಈ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಪ್ರಕಟಿಸದೆ ಹಾಗೆಯೇ ಬಿಟ್ಟಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement