ಗೋವಾ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಸಂಚಾಲಕರಾಗಿ ಸದಾನಂದ ಡಂಗನವರ ನೇಮಕ

ಹುಬ್ಬಳ್ಳಿ: ಗೋವಾ ರಾಜ್ಯದ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಸಂಚಾಲಕರನ್ನಾಗಿ ( ಕೋ ಆರ್ಡಿನೇಟರ್) ಸದಾನಂದ ವಿ.ಡಂಗನವರ ಅವರನ್ನು ನೇಮಕ ಮಾಡಲಾಗಿದೆ.
ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ನಿರ್ದೇಶನದ ಮೇರೆಗೆ ಗೋವಾದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸದಾನಂದ ವಿ. ಡಂಗನವರ ಅವರನ್ನು ಗೋವಾ ರಾಜ್ಯದ ಕಾಂಗ್ರೆಸ್ ಪಕ್ಷದ ಸಂಚಾಲಕರನ್ನಾಗಿ ( ಕೋ ಆಡಿನೇಟರ್ ) ನೇಮಕ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲು ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement