ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ ಮುಖ್ಯಮಂತ್ರಿಗಳಿಗೂ ಗೊತ್ತಿದೆ ಎಂದು ಹೇಳಿದರು.
ಕೇವಲ ಮುಡಾ ಅಷ್ಟೇ ಅಲ್ಲ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವೂ ಇದೆ. ಸಿದ್ದರಾಮಯ್ಯ ಅವರು ಮನೆಗೆ ಹೋಗುತ್ತಾರೆ, ಕಾಂಗ್ರೆಸ್​ನಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ. ಹೀಗಾಗಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ತಮ್ಮ ಪರವಾಗಿದೆ ಎಂದು ಪದೇಪದೇ ಹೇಳುತ್ತಿದ್ದಾರೆ. ಆದರೆ ದೆಹಲಿಗೆ ಹೋಗಿ ಒಮ್ಮೆ ರಾಹುಲ್​ ಗಾಂಧಿ ಭೇಟಿ ಮಾಡಿ ವಿವರಣೆ ನೀಡುತ್ತಾರೆ, ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​ ಖರ್ಗೆ ಭೇಟಿ ಮಾಡಿ ವಿವರಣೆ ಕೊಡುತ್ತಾರೆ ಎಂದರು. . ಹೈಕಮಾಂಡ್ ಸಿಎಂ ಅವರ ಪರವಾಗಿದ್ದರೆ ಸಿದ್ದರಾಮಯ್ಯ ಅವರು ಯಾಕೆ ಪದೇ ಪದೇ ದೆಹಲಿಗೆ ಹೋಗಿ ಹೈಕಮಾಂಡ್‌ ಭೇಟಿಯಾಗುತ್ತಾರೆ ಎಂದು ಪ್ರಶ್ನಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement