ಮುಂಬೈ-ಗೋವಾ ಹೆದ್ದಾರಿಯಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆ | ವೀಡಿಯೊ

ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಸೋಮವಾರ ಚಿಪ್ಲುನ್‌ನಲ್ಲಿ ಕುಸಿದು ಬಿದ್ದಿದೆ. ಪಿಲ್ಲರ್ ಕುಸಿದ ಕೆಲವೇ ಕ್ಷಣಗಳಲ್ಲಿ ಮೇಲ್ಸೇತುವೆಯ ಒಂದು ಭಾಗವೂ ಕುಸಿದು ಬಿದ್ದಿದ್ದು, ನಿರ್ಮಾಣ ಸ್ಥಳದಲ್ಲಿ ಬಳಸುತ್ತಿದ್ದ ಕ್ರೇನ್ ಯಂತ್ರಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲುನ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ನಿರ್ಣಾಯಕ ಅಂಶವಾದ ಗರ್ಡರ್, ಬೆಳಗಿನ ಸಮಯದಲ್ಲಿ ಅದರ ಎತ್ತರದ ಸ್ಥಳದಲ್ಲಿ ಇರಿಸಲ್ಪಟ್ಟ ನಂತರ ಗಮನಾರ್ಹವಾದ ಬಿರುಕುಗಳು ಕಾಣಿಸಿಕೊಂಡ ನಂತರ ಈ ದುರ್ಘಟನೆ ಸಂಭವಿಸಿದೆ.

ಘಟನೆ ಸಂಭವಿಸಿದ ತಕ್ಷಣ ಪ್ರದೇಶವನ್ನು ಬಂದ್‌ ಮಾಡಲಾಯಿತು.ಮಧ್ಯಾಹ್ನ ಸೋಮವಾರ 2:45 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 30 ಮೀಟರ್ ನೆಲಕ್ಕೆ ಕುಸಿಯಿತು ಎಂದು ತಿಳಿಸಲಾಗಿದೆ. ಆದರೆ ಘಟನೆಯಲ್ಲಿ ಯಾರಿಗೂ ಗಾಐವಾದ ಘಟನೆ ವರದಿಯಾಗಿಲ್ಲ. ತಕ್ಷಣವೇ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಹಿಂದೆ ಇದೇ ರೀತಿಯ ಘಟನೆಯಲ್ಲಿ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದರು, ಆರು ಮಂದಿ ಗಾಯಗೊಂಡಿದ್ದರು.

ಪ್ರಮುಖ ಸುದ್ದಿ :-   26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement