ಅಲ್-ಖೈದಾ ಭಯೋತ್ಪಾದನಾ ಜಾಲ ಭೇದಿಸಿದ ಪೊಲೀಸರು; 14 ಮಂದಿ ಬಂಧನ

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕ ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂಬಂಧ ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಸ್ತ್ರಾಸ್ತ್ರ ತರಬೇತಿ ವೇಳೆ ರಾಜಸ್ಥಾನದ ಭಿವಾಡಿಯಿಂದ ಆರು ಮಂದಿಯನ್ನು ಬಂಧಿಸಲಾಗಿತ್ತು. ಹೆಚ್ಚುವರಿಯಾಗಿ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದಿಂದ ಎಂಟು ವ್ಯಕ್ತಿಗಳನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ. ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದ, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಘೋಷಿಸಲು ಮತ್ತು ದೇಶದೊಳಗೆ ಗಂಭೀರ ಭಯೋತ್ಪಾದಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸುವ ಉದ್ದೇಶ ಹೊಂದಿರುವಗುಂಪು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಸಂಘಟನೆಯ ಸದಸ್ಯರಿಗೆ ಶಸ್ತ್ರಾಸ್ತ್ರಗಳ ನಿರ್ವಹಣೆ ಸೇರಿದಂತೆ ವಿವಿಧ ಉಗ್ರ ಚಟುವಟಿಕೆಯ ತರಬೇತಿ ನೀಡಲಾಗುತ್ತಿತ್ತು. ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಪಡೆಗಳು ದಾಳಿ ನಡೆಸುತ್ತಿವೆ.

ಪ್ರಮುಖ ಸುದ್ದಿ :-   ಪಾಕ್‌ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ...! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement