ಯೋಗೀಶ್‌ ಗೌಡ ಕೊಲೆ ಪ್ರಕರಣ : ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ವಿನಯ ಕುಲಕರ್ಣಿ

ಬೆಂಗಳೂರು : ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬದಿಗೆ ಸರಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, ಅದು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ 17 ಜನರನ್ನು ಅಪರಾಧಿಗಳು ಎಂದು ತೀರ್ಮಾನಿಸಿರುವ ಜನ ಪ್ರತಿನಿಧಿಗಳ ಸತ್ರ ನ್ಯಾಯಾಲಯವು 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಈ ಶಿಕ್ಷೆ ವಿಧಿಸಿ ಆದೇಶಿಸಿದ್ದರು. 2016 ರಲ್ಲಿ ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಅವರ ಹತ್ಯೆ ನಡೆದಿತ್ತು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement