ಸುಪ್ರೀಂಕೋರ್ಟಿನಿಂದ ಮಹತ್ವದ ತೀರ್ಪು, ಎಲ್ಲ ರಾಜ್ಯಗಳಿಗೂ ಅನ್ವಯ : ಶೀಘ್ರವೇ ಬಿಬಿಎಂಪಿ ಚುನಾವಣೆ ಸಾಧ್ಯತೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.
ಮಧ್ಯಪ್ರದೇಶದಲ್ಲಿ ಎರಡು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಕೋರ್ಟ್‌, ಸ್ಥಳೀಯ ಸಂಸ್ಥೆಗಳಿಗೆ ಎರಡು ವಾರಗಳಲ್ಲಿ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ ತೀರ್ಪು ಎಲ್ಲಾ ರಾಜ್ಯಗಳಲ್ಲಿ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂಬ ಮಾತನ್ನೂ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.‌ ಅಶೋಕ್‌ ಅವರು, ಮಧ್ಯ ಪ್ರದೇಶ ಪ್ರಕರಣದಲ್ಲಿ ಮೂರು ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಪ್ರಕರಣವಿತ್ತು. ಲಿಸ್ಟ್ ಆಗಲು ಮೂರು ತಿಂಗಳು ಇತ್ತು. ಮಧ್ಯ ಪ್ರದೇಶಕ್ಕೆ ನೀಡಿದ ಆದೇಶವಾದರೂ ಅದು ಎಲ್ಲಾ ರಾಜ್ಯಕ್ಕೂ ಅನ್ವಯ ಅಂತ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಎಲ್ಲ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಕಳೆದ ಬಾರಿ ನಡೆದ ಚುನಾವಣೆ ಪ್ರಕಾರವೇ ಚುನಾವಣೆ ನಡೆಸಲು ಸೂಚಿಸಿದೆ. ಹೀಗಾಗಿ 198 ವಾರ್ಡ್ ಪ್ರಕಾರವೇ ಬಿಬಿಎಂಪಿ ಚುನಾವಣೆ ನಡೆಯಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಮಾತಾನಾಡುತ್ತೇನೆ ಎಂದು ಅವರು ಹೇಳಿದರು.
ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಬೇಕಾಗಿದೆ. ಸುಪ್ರೀಂ ಆದೇಶ ಪಾಲನೆ ಮಾಡಬೇಕು. 198 ವಾರ್ಡುಗಳಿಗೆ ಮಾತ್ರ ಚುನಾವಣೆ ನಡೆಯಲಿದೆ‌. ಮೀಸಲಾತಿ ವಿಚಾರದ ಬಗ್ಗೆ ಅಡ್ವೋಕೆಟ್ ಜನರಲ್ ಜೊತೆ ಮಾತನಾಡುತ್ತೇವೆ ಎಂದ ಅವರು ಹೇಳಿದ್ದಾರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement