ಕರ್ನಾಟಕದಲ್ಲಿ 24 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 9 ಜಿಲ್ಲೆಗಳಿಗೆ ರೆಡ್ ಅಲರ್ಟ್​, ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಪ್ರದೇಶಗಳು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಜೂ.12ರಿಂದ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, 9 ಜಿಲ್ಲೆಗಳಿಗೆ ಎರಡು ದಿನ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಮೇ ತಿಂಗಳಲ್ಲಿ ಆರ್ಭಟಿಸಿದ್ದ ಮಳೆ ಜೂನ್‌ ಮೊದಲ ವಾರ ಬಿಡುವು ನೀಡಿತ್ತು, ಈಗ ಮಳೆ ಜೋರಾಗಿ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಜೂನ್‌ 11ರಂದು ಬಹುತೇಕ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.ಜೂನ್‌ 12 ಹಾಗೂ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅರೆಮಲೆನಾಡು ಜಿಲ್ಲೆಗಳಾದ ಹಾವೇರಿ, ಧಾರವಾಡ, ಬೆಳಗಾವಿಗೂ ಅತ್ಯಂತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ ಜಿಲ್ಲೆಗಳಿಗೆ ಜೂ.12ರಿಂದ ಮುಂದಿನ 2 ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಜೋರಾಗಿ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement