ಸಿದ್ದಾಪುರ : ಸರ್ಕುಳಿ ಸೇತವೆ ಮೇಲೆ 3 ಅಡಿಗಳಷ್ಟು ನೀರು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅಘನಾಶಿನಿ ನದಿ ಪಾತ್ರದಲ್ಲಿ ವಿಪರೀತ ಮಳೆಯಾಗುತ್ತಿದೆ. ಸಿದ್ದಾಪುರ ತಾಲೂಕಿನ ನಿಲ್ಕುಂದ, ಹೆಗ್ಗರಣಿ, ತಟ್ಟಿಕೈ, ಬಾಳೇಸರ, ಹಾರ್ಸಿಕಟ್ಟಾ ಸುತ್ತಮುತ್ತ ವಿಪರೀತ ಮಳೆಯಾಗಿತ್ತಿದ್ದು, ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದೆ.

ಶಿರಸಿ ಸಿದ್ದಾಪುರ ತಾಲೂಕಿನ ಗಡಿ ಸರ್ಕುಳಿಯಲ್ಲಿ ಸೇತುವೆ ಮೇಲೆ 3-4 ಅಡಿಗಳಷ್ಟು ನೀರು ಹರಿಯುತ್ತಿದೆ. ಅಲ್ಲಿಯ ಮಹಿಷಾಸುರ ಮರ್ಧಿನಿ ದೇವಾಲಯದ ಅಂಗಳಕ್ಕೆ ನೀರು ನುಗ್ಗುತ್ತಿದೆ. ಸರ್ಕುಳಿಯ ಮೂರು ಮನೆಗಳ ಒಳಗೆ ನೀರು ನುಗ್ಗುವ ಸಾಧ್ಯತೆ ಇದೆ.

ಅಂಬೆಗಾರು, ಹೊನಗಾರಮನೆಯ ಸುಮಾರು ೨೫ ಕುಟುಂಬಗಳಿಗೆ ಮುಖ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೇರೂರು, ತಟ್ಟೀಕೈ, ಗೋಳಿಮಕ್ಕಿ ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಗಳಿಗೆ ಸಂಪರ್ಕಕ್ಕೆ ಇದರಿಂದ ತೊಂದರೆಯಾಗಿದೆ. ಹೊಸಕರೆ ಸೇತುವೆ ಮೇಲೆ ನೀರು ಹರಿಯುತ್ತಿದೆ ಎಂದು ವರದಿಯಾಗಿದೆ. ನೆಲಮಾಂವ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement