ಕೊಟ್ಟ ಮಾತಿನಂತೆ ಕಿಕ್ ಸ್ಟಾರ್ಟ್ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ ಮಹೀಂದ್ರಾ

ಮುಂಬೈ: ಹಲವಾರು ವಾಹನಗಳ ಬಿಡಿಭಾಗಗಳನ್ನು ಉಪಯೋಗಿಸಿ ಹೊಸ ಮಾದರಿಯ ಕಿಕ್ ಸ್ಟಾರ್ಟ್ ಜೀಪ್ ತಯಾರಿಸಿದ್ದ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ನೂತನ ವಾಹನ ಉಡುಗೊರೆಯಾಗಿ ನೀಡಿದ್ದಾರೆ.
ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಯಾರಿಸಿದ ಕಿಕ್-ಸ್ಟಾರ್ಟ್‌ ಜೀಪ್‌ ವಿಡಿಯೊ ಹಂಚಿಕೊಂಡಿದ್ದ ಆನಂದ್ ಮಹೀಂದ್ರಾ, ಅವರಿಗೆ ಮಹಿಂದ್ರಾ ಕಮಪನಿಯ ಬೊಲೆರೋ ಕಾರು ಗಿಫ್ಟ್ ನೀಡುವುದಾಗಿ ಮಾತು ಕೊಟ್ಟಿದ್ದರು. ಈಗ ಅವರು ತಮ್ಮ ಮಾತಿನಂತೆ ನಡೆದುಕೊಂಡಿದ್ದಾರೆ.

ಮಹಾರಾಷ್ಟ್ರದ ದತ್ತಾತ್ರೇಯ ಲೋಹರ್ ಎಂಬವರು ಹಳೆಯ ವಾಹನದ ಬಿಡಿ ಭಾಗಗಳನ್ನು ಬಳಸಿ ಈ ವಾಹನ ಸಿದ್ಧಪಡಿಸಿದ್ದರು. ಇದಕ್ಕಾಗಿ 60 ಸಾವಿರ ರೂ. ಖರ್ಚು ಮಾಡಿದ್ದರು. ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋವನ್ನು ಟ್ವೀಟ್ ಮಾಡಿದ್ದ ಆನಂದ್ ಮಹೀಂದ್ರಾ, “ಇದು ಸ್ಪಷ್ಟವಾಗಿ ಯಾವುದೇ ನಿಯಮಗಳನ್ನು ಅನುಸರಿಸುವುದಿಲ್ಲ. ಆದರೆ ನಮ್ಮ ಜನರ ಜಾಣ್ಮೆ ಮತ್ತು ಸಾಮರ್ಥ್ಯಗಳನ್ನು ಮೆಚ್ಚುವುದನ್ನು ನಾನು ಎಂದಿಗೂ ನಿಲ್ಲಿಸುವುದಿಲ್ಲ. ನಿಯಮಗಳನ್ನು ಉಲ್ಲಂಘಿಸಿ ಈ ವಾಹನ ನಿರ್ಮಾಣ ಮಾಡಿರುವ ಕಾರಣ ಸ್ಥಳೀಯ ಅಧಿಕಾರಿಗಳು ಈತನಿಗೆ ವಾಹನ ಓಡಿಸದಂತೆ ತಡೆಯುತ್ತಾರೆ. ನಾನು ವೈಯಕ್ತಿಕವಾಗಿ ಅವನಿಗೆ ಬೊಲೆರೊವನ್ನು ನೀಡ ಬಯಸುತ್ತೇನೆ. ಅವರು ತಮ್ಮ ವಾಹನವನ್ನು ‘ಮಹೀಂದ್ರಾ ರಿಸರ್ಚ್ ವ್ಯಾಲಿ’ ಯಲ್ಲಿ ಪ್ರದರ್ಶಿಸಬಹುದು” ಎಂದು ಬರೆದುಕೊಂಡಿದ್ದರು.
ಈಗ ಆನಂದ್ ಮಹೀಂದ್ರಾ ಅವರು ದತ್ತಾತ್ರೇಯ ಲೋಹರ್ ಅವರಿಗೆ ಹೊಸ ಬೊಲೆರೊ ವಾಹನ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ತನ್ನ ವಾಹನವನ್ನು ಹೊಸ ಬೊಲೆರೊಗೆ ಬದಲಾಯಿಸುವ ಪ್ರಸ್ತಾಪವನ್ನು ಅವರು ಒಪ್ಪಿಕೊಂಡಿದ್ದಾರೆ. ನಿನ್ನೆ ಅವರ ಕುಟುಂಬವು ಬೊಲೆರೊವನ್ನು ಸ್ವೀಕರಿಸಿದೆ ಮತ್ತು ನಾವು ಅವರ ನಿರ್ಮಿಸಿದ ವಾಹನದ ಜವಾಬ್ದಾರಿಯನ್ನು ಹೆಮ್ಮೆಯಿಂದ ವಹಿಸಿಕೊಂಡಿದ್ದೇವೆ. ಇದು ನಮ್ಮ ರಿಸರ್ಚ್ ವ್ಯಾಲಿಯಲ್ಲಿನ ಎಲ್ಲಾ ಪ್ರಕಾರದ ಕಾರುಗಳ ಸಂಗ್ರಹದ ಭಾಗವಾಗಿರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಮೊಬೈಲ್‌, ಚಿನ್ನದ ಸರ ಖರೀದಿಸಲು 1 ತಿಂಗಳ ಮಗುವನ್ನೇ ಮಾರಿದ ದಂಪತಿ; ಪೊಲೀಸರು ಪತ್ತೆ ಮಾಡುವ ಮೊದಲು ನಾಲ್ವರಿಗೆ ಮಾರಾಟ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement