ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಮಹಿಳೆ….!

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ.
ಈ ಆಘಾತಕಾರಿ ಘಟನೆಯಲ್ಲಿ, 35 ವರ್ಷದ ವಿವಾಹಿತ ವ್ಯಕ್ತಿ ಸೋಮವಾರ ಮಧ್ಯಾಹ್ನ ತನ್ನ ಮಾಜಿ ಗೆಳತಿ ಒಲೆಗಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಹೋದಾಗ ಅವಳನ್ನು ಹಿಂಬಾಲಿಸಿದ್ದ ಎಂದು ಆರೋಪಿಸಲಾಗಿದೆ.
ಪೋಷಕರು ಆಯ್ಕೆ ಮಾಡಿದ ವ್ಯಕ್ತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಚಂಪಿಯೊಂದಿಗೆ ಮಾತುಕತೆ ನಿಲ್ಲಿಸಿದ್ದಳು. ಆಕೆಯ ನಿರ್ಧಾರದಿಂದ ನೊಂದಿದ್ದ ಈತ ಆಕೆ ತನ್ನನ್ನು ದೂರವಿಟ್ಟರೂ ಆಕೆಯನ್ನು ಸಂಪರ್ಕಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

NDTV ವರದಿಯ ಪ್ರಕಾರ, ಮಹಿಳೆ ಕೊಳದ ಬಳಿ ಒಬ್ಬಂಟಿಯಾಗಿದ್ದಾಗ, ಚಂಪಿ ಹತ್ತಿರ ಬಂದು, ಅವಳನ್ನು ಹಿಡಿದು ಬಲವಂತವಾಗಿ ಚುಂಬಿಸಲು ಮತ್ತು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾನೆ. ಮಹಿಳೆ ಇದನ್ನು ವಿರೋಧಿಸಿ ನಡೆಸಿದ ಹೋರಾಟದಲ್ಲಿ ಅವಳು ಆತನ ನಾಲಿಗೆಯನ್ನು ತೀವ್ರವಾಗಿ ಕಚ್ಚಿದಳು, ಅದರ ಒಂದು ಭಾಗವು ತುಂಡಾಯಿತು ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಚಂಪಿ ಕಳೆದ ಕೆಲವು ದಿನಗಳಿಂದ ಯುವತಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ. ಆತನಿಗೆ ಎಷ್ಟೇ ಎಚ್ಚರಿಕೆ ನೀಡಿದರೂ ತನ್ನ ವರ್ತನೆಯನ್ನು ಬದಲಾಯಿಸಿರಲಿಲ್ಲ.

ಪ್ರಮುಖ ಸುದ್ದಿ :-   ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಯಾಮಿ ಗೌತಂ ಅತ್ಯುತ್ತಮ ನಟಿ, ಕಾರ್ತಿಕ್ ಆರ್ಯನ್–ಮಮ್ಮುಟ್ಟಿ ಅತ್ಯುತ್ತಮ ನಟರು ; ಪ್ರಶಸ್ತಿಗಳ ಪಟ್ಟಿ

ಘಟನೆ ನಂತರ ಯುವತಿ ತನ್ನ ಸಹೋದರರಿಗೆ ವಿಷಯ ತಿಳಿಸಿದ್ದಳು, ಆದರೆ ಪೊಲೀಸರ ತನಿಖೆಯಲ್ಲಿ ಘಟನೆ ನಡೆದ ಸಮಯದಲ್ಲಿ ಸಹೋದರರು ಗ್ರಾಮದಲ್ಲಿ ಇರಲಿಲ್ಲ ಎಂಬುದು ತಿಳಿದುಬಂದಿದೆ.
ಪೊಲೀಸರು ತಕ್ಷಣ ಗಾಯಗೊಂಡ ವ್ಯಕ್ತಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರ ವೈದ್ಯಕೀಯ ಕಾಲೇಜಿಗೆ (Kanpur Medical College) ಕಳುಹಿಸಲಾಗಿದೆ. ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಕೊಂಡಿದ್ದು, ಆತ ಚೇತರಿಸಿಕೊಂಡ ತಕ್ಷಣವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement