ಶಿಗ್ಗಾವಿ | ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾವೇರಿ: ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಕೆರೆಗೆ ಇಳಿದಿದ್ದಾರೆ. ಈಜಲು ಬಾರದೇ ನೀರಿನಲ್ಲಿ ಮುಳುಗಿದ್ದಾರೆ. ಕೆರೆಯ ದಡದಲ್ಲಿ ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಕೆರೆ ಬಳಿ ಬಂದು ನೋಡಿದ್ದಾರೆ. ಆಗ ಅವರಿಗೆ ವಿಷಯ ಗೊತ್ತಾಗಿದೆ. ತಕ್ಷಣವೇ ಅವರು ಸಂಬಂಧಿಸಿದವರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ. ಓರ್ವ ಬಾಲಕನ ಮೃತದೇಹ ಕೆರೆಯಿಂದ ಹೊರತೆಗೆದಿದ್ದು, ಮತ್ತೊಬ್ಬನಿಗಾಗಿ ಹುಡುಕಾಡ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಶಿಗ್ಗಾಂವಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement