ಕೆ-ಸೆಟ್‌ ಪರೀಕ್ಷೆ ಜುಲೈ 25ರಂದು

ಮೈಸೂರು: ಕೋವಿಡ್‌ ಕಾರಣದಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ದಿನಾಂಕವನ್ನು ಮರುನಿಗದಿ ಮಾಡಲಾಗಿದ್ದು, ಜುಲೈ 25ರಂದು ಪರೀಕ್ಷೆ ನಡೆಯಲಿದೆ.
ಈ ಮೊದಲು ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಲಾಕ್‌ಡೌನ್‌ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿಶ್ವ ವಿದ್ಯಾಲಯ ಪ್ರಕಟಣೆ ಹೊರಡಿಸಿದೆ.
ಹೆಚ್ಚಿನ ಮಾಹಿತಿಗೆ ಮೈಸೂರು ವಿಶ್ವವಿದ್ಯಾಲಯದ ವೆಬ್​ಸೈಟ್‌ http://kset.uni-mysore.ac.in/ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement