ರಾಜ್ಯ ಬಜೆಟ್‌: ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ ಜೊತೆ ಮಕ್ಕಳ ಆರೈಕೆ ರಜೆ ಗಿಫ್ಟ್‌

ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳು ಹಾಲಿ ಜಾರಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ವರೆಗೆ ಮಕ್ಕಳ ಆರೈಕೆ ರಜೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ದಿನಾಚರಣೆಯಂದೇ ಯಡಿಯೂರಪ್ಪ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
2021-22ನೇ ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಿರ್ಭಯಾ ಯೋಜನೆಯಡಿ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸೇಫ್ ಸಿಟಿ ಯೋಜನೆ ಚುರುಕುಗೊಳಿಸಿ, ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ 7500 ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆ ಖಾತರಿಪಡಿಸಲಾಗುವುದು ಎಂದರು.
ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಮಹಿಳಾ ಉದ್ಯೋಗಿಗಳಿಗೆ ಈಗ ಜಾರಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ವರೆಗೆ ಮಕ್ಕಳ ಆರೈಕೆ ರಜೆ ಒದಗಿಸಲಾಗುವುದು. ಈ ಮೂಲಕ ಮಹಿಳಾ ಕ್ಷೇಮಾಭಿವೃದ್ಧಿಗೆ ಪೂರಕ ಹೆಜ್ಜೆ ಇರಿಸಿದ್ದಾರೆ. ಮಹಿಳೆಯರ ಕಾರ್ಯಕ್ಷಮತೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement