ಶಾರುಖ್ ಖಾನ್ ಪತ್ನಿ ಗೌರಿ ಖಾನ್, ಇತರರ ವಿರುದ್ಧ ಲಕ್ನೋದಲ್ಲಿ ದೂರು ದಾಖಲು

ನವದೆಹಲಿ: ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್‌ಐಆರ್ ದಾಖಲಾಗಿದೆ. ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮುಂಬೈನ ನಿವಾಸಿ ಜಸ್ವಂತ್ ಷಾ ಎಂಬವರು ದೂರು ಸಲ್ಲಿಸಿದ್ದು, ಗೌರಿ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯು 86 ಲಕ್ಷ ರೂಪಾಯಿ ಶುಲ್ಕ ಪಾವತಿಸಿದ್ದರೂ ನನಗೆ ಫ್ಲಾಟ್‌ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ ಪ್ರದೇಶದ ತುಳಸಿಯಾನಿ ಗಾಲ್ಫ್ ವ್ಯೂನಲ್ಲಿರುವ ಫ್ಲಾಟ್ ಅನ್ನು ಬೇರೆಯವರಿಗೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ ಪ್ರದೇಶದ ತುಳಸಿಯಾನಿ ಗಾಲ್ಫ್ ವ್ಯೂನಲ್ಲಿರುವ ಫ್ಲಾಟ್ ಅನ್ನು ಬೇರೆಯವರಿಗೆ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನಲ್ಲಿ ಗೌರಿ ಅವರ ಜೊತೆಗೆ ಅನಿಲಕುಮಾರ ತುಳಸಿಯಾನಿ, ಕನ್‌ಸ್ಟ್ರಕ್ಷನ್ ಅಂಡ್ ಡೆವಲಪ್‌ಮೆಂಟ್ ಕಂಪನಿಯ ನಿರ್ದೇಶಕ ಮಹೇಶ್ ತುಳಸಿಯಾನಿ ಅವರ ಹೆಸರಿದೆ.
ಬ್ರಾಂಡ್ ಅಂಬಾಸಿಡರ್ ಗೌರಿ ಖಾನ್ ಅವರಿಂದ ಪ್ರಭಾವಿತರಾಗಿ ಫ್ಲಾಟ್ ಖರೀದಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ.
ಗೌರಿ ಖಾನ್ ಅವರು ಬಾಲಿವುಡ್ ನಟ ಶಾರುಖ್ ಖಾನ್ ಅವರ ಪತ್ನಿ ಮತ್ತು ವೃತ್ತಿಯಲ್ಲಿ ಇಂಟೀರಿಯರ್ ಡಿಸೈನರ್.

ಪ್ರಮುಖ ಸುದ್ದಿ :-   ವೀಡಿಯೊ...| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement