ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು…!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಹಿಮಾಚಲ ಪ್ರದೇಶ ಉಸ್ತುವಾರಿ ಸ್ಥಾನವನ್ನೂ ತ್ಯಜಿಸಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ, “ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಎಐಸಿಸಿ ಕಾರ್ಯದರ್ಶಿ, ಹಿಮಾಚಲ ಪ್ರದೇಶದ ಸಹ-ಪ್ರಭಾರಿ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತೇನೆ” ಎಂದು ಬರೆದಿದ್ದಾರೆ.

“ಭಾರವಾದ ಹೃದಯದಿಂದ, 35 ವರ್ಷಗಳ ನಂತರ, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ತಜೀಂದರ್ ಸಿಂಗ್ ಬಿಟ್ಟು ಅವರು ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.
2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಒಂದು ದಿನದ ನಂತರ ತಜೀಂದರ್ ಸಿಂಗ್ ಬಿಟ್ಟು ರಾಜೀನಾಮೆ ನೀಡಿದ್ದಾರೆ. ಶುಕ್ರವಾರ 21 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ (UTs) 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನವನ್ನು ನಡೆಸಲಾಯಿತು.

ಪ್ರಮುಖ ಸುದ್ದಿ :-   ಸಿಖ್‌ ಪವಿತ್ರ ಗ್ರಂಥದ ಕೆಲ ಪುಟ ಹರಿದು ಹಾಕಿದ ಆರೋಪ : ಯುವಕನನ್ನು ಬಡಿದುಕೊಂದ ಭಕ್ತರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement