ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ವ್ಯಾಪಕ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದು ದಿನಗಳ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು ನವೆಂಬರ್ 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಅಕ್ಟೋಬರ್ 31 ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದ್ದು, ನವೆಂಬರ್‌ 1 ಮತ್ತು 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಯೊಂದಿಗೆ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಳಿಯೂ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement