ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಳವಿಲ್ಲ:ಸವದಿ

posted in: ರಾಜ್ಯ | 0

ಮೈಸೂರು: ರಾಜ್ಯದಲ್ಲಿ ಆವರಿಸಿರುವ ಕೊರೋನಾ, ಲಾಕಡೌನ್ ಹಾಗೂ ಸಾರಿಗೆ ಇಲಾಖೆ ನೌಕಕರ ಮುಷ್ಕರದಿಂದಾಗಿ ರಾಜ್ಯ ಸಾರಿಗೆ ಸಂಸ್ಥೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದರೂ   ಕೆ.ಎಸ್.ಆರ್.ಟಿ ಸಿ. ಬಸ ಪ್ರಯಾಣ ದರವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ   ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಮೈಸೂರಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕೊರೊನಾದಿಂದ ಸಾರಿಗೆ ನಿಗಮಕ್ಕೆ ನಷ್ಟ ಆಗಿರುವುದು ನಿಜ. ಆದರೆ ಜನರು ಸಹ ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣ ದರ ಏರಿಕೆ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬಸ್ ಪ್ರಯಾಣ ದರ ಏರಿಕೆ ಬೇಡ ಎಂದು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಪಡಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯಿಸಿದ  ಸವದಿ , ಸರಕಾರ ೯ ಬೇಡಿಕೆಯಲ್ಲಿ ೮ ಬೇಡಿಕೆ ಈಡೇರಿಸಿದೆ. ವೇತನ ಪರಿಷ್ಕರಣೆ ಸದ್ಯ ಪರಿಶೀಲನೆ ಆಗುವುದಿಲ್ಲ. ಸರ್ಕಾರಕ್ಕೆ ಬರುತ್ತಿರುವ ಹಣ ನಿಗಮದ ನಿರ್ವಹಣೆಗೆ ಕಷ್ಟವಾಗುತ್ತಿದೆ. ಇದರಿಂದಾಗಿ ಸದ್ಯಕ್ಕೆ ವೇತನ ಹೆಚ್ಚಳ ಮಾಡುವುದು ಕಷ್ಟ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೆಲ ಶಾಸಕರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೂ ಕೆಲವರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಅಲ್ಲ ಎಂದು ಸವದಿ ಹೇಳಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement