ಕಾಂಗ್ರೆಸ್‌: ಮಸ್ಕಿಯಲ್ಲಿ 29, ಬಸವ ಕಲ್ಯಾಣ 30ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ಮಸ್ಕಿಯಲ್ಲಿ ಮಾ. 29 ರಂದು ಹಾಗೂ ಬಸವ ಕಲ್ಯಾಣದಲ್ಲಿ ಮಾ.30 ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಶನಿವಾರ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯ ನಂತರ ಮಾಧ್ಯಮಗಳಿಗೆ ಶನಿವಾರ ಮಾಹಿತಿ ನೀಡಿದಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಒಬ್ಬರೇ ಅಭ್ಯರ್ಥಿ ಹೆಸರು ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊರೊನಾ ಮಾರ್ಗಸೂಚಿ ಇನ್ನೂ ಗೊಂದಲದಲ್ಲಿದೆ. 500 ಜನ ಎಂದು ಹೇಳಿದ್ದರು. ನಾವು ಕೂಡ ನಿನ್ನೆ, ಇವತ್ತು ಹಾಗೂ ನಾಳೆ ನಿಗದಿಯಾಗಿದ್ದ ಸಭೆಯನ್ನು ಕೊರೊನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ರದ್ದು ಮಾಡಿದ್ದೇವೆ. ಆಡಳಿತ ಪಕ್ಷ ಇವತ್ತು ಸಭೆ ನಡೆಸುತ್ತಿದೆ. ಸರ್ಕಾರವಂತೂ ಈ ಚುನಾವಣೆ ಹಾಗೂ ಮಾರ್ಗಸೂಚಿ ವಿಚಾರದಲ್ಲಿ ಗೊಂದಲದಲ್ಲಿದೆ ಎಂದು ಹೇಳಿದರು.
ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ನಾಯಕರಿಗೆ ಉಸ್ತುವಾರಿ ವಹಿಸಲಾಗುವುದು. ಸ್ಥಳೀಯ ನಾಯಕರ ಅಭಿಪ್ರಾಯದ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದ ಹಿರಿಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ತೀರ್ಮಾನ ಮಾಡಲಾಗಿದೆ. ಹೆಚ್ಚು ಬಹಿರಂಗ ಸಭೆಗಳನ್ನು ಮಾಡದೆ ಎರಡೆರಡು ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದರು
ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಮಸ್ಕಿಯಲ್ಲಿ ಮಾ.29 ರಂದು, ಬಸವ ಕಲ್ಯಾಣದಲ್ಲಿ ಮಾ. 30 ರಂದು ನಾಮಪತ್ರ ಸಲ್ಲಿಸಲಾಗುವುದು. ನಾವೆಲ್ಲರೂ ಅಲ್ಲಿಗೆ ಹೋಗುತ್ತಿದ್ದೇವೆ. ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಅಂತಿಮ ತೀರ್ಮಾನ ಮಾಡಿಲ್ಲ. ಈ ಉಪಚುನಾವಣೆಗೆ ಎಲ್ಲರೂ ಉತ್ಸಾಹದಲ್ಲಿದ್ದು, ಮೂರೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದರು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement