ಕರ್ನಾಟಕದಲ್ಲಿ ಗುರುವಾರ ಕೊರೊನಾ ಹೊಸ ಸೋಂಕು, ಸಾವು ಎರಡೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗುರುವಾರ ಮತ್ತೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 18,324 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2653446ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 514 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 30531 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 24036 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಇದುವರೆಗೆ 23,36,096 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 2,86,798ಕ್ಕೆ ಇಳಿದಿದೆ.
ಬೆಂಗಳೂರಿನಲ್ಲಿ ಗುರುವಾರ 3533 ಜನರಿಗೆ ಸೋಂಕು ತಗಲಿದ್ದು, 347 ಸೋಂಕಿತರು ಮೃತಪಟ್ಟಿದ್ದಾರೆ. ಇದೇ ವೇಳೆ 7622 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಎಲ್ಲ ಜಿಲ್ಲೆಗಳ ಸಂಪೂರ್ಣ ವಿವರಗಳನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

03-06-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement