ಮಹಾರಾಷ್ಟ್ರದಲ್ಲಿ ಬೆಳಿಗ್ಗೆ 7ರಿಂದ 11ರ ವರೆಗೆ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ

ಮುಂಬೈ: ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮಹಾರಾಷ್ಟ್ರದಲ್ಲಿ ಅತಿ ವೇಗವಾಗಿ ಸೋಂಕು ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ಸರ್ಕಾರ ಈಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಂಗಳವಾರದಿಂದ ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳಿಗೆ ಬೆಳಗ್ಗೆ 7ರಿಂದ 11 ಗಂಟೆ ವರೆಗೆ ಮಾತ್ರ ತೆರೆಯಲು ಅವಕಾಶ ನೀಡಿದೆ.
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಕಠಿಣ ಕೋವಿಡ್ ಮಾನದಂಡಗಳನ್ನು ಜಾರಿ ಮಾಡುತ್ತಿದೆ. ಏಪ್ರಿಲ್ 20ರಿಂದ ದಿನಸಿ ಮತ್ತು ಇತರ ಅಂಗಡಿಗಳಿಗೆ ಬೆಳಗ್ಗೆ 7 ರಿಂದ 11 ರ ವರೆಗೆ ಮಾತ್ರ ತೆರೆಯಲು ಅವಕಾಶವಿರುತ್ತದೆ. ವಾರಾಂತ್ಯದ ಲಾಕ್​ಡೌನ್​ ಮುಂದುವರಿಯುತ್ತದೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement