ಭೀಕರ ಅಪಘಾತ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು

ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ 7 ರ ವೇಳೆಗೆ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಗಂಡ, ಹೆಂಡತಿ ಹಾಗೂ ಮಗು ಸಹಿತ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರು ನಾಗರಾಜ (40) ಪ್ರತ್ಯುಷಾ (32) ಹಾಗೂ 2 ವರ್ಷದ ಮಗು.  ಆಂಧ್ರಪ್ರದೇಶದ ಮೂಲದ ಕುಟುಂಬ ಕಾರಿನಲ್ಲಿ ಧರ್ಮಸ್ಥಳ ಪ್ರವಾಸ ಮುಗಿಸಿ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಕಾರು ಮತ್ತು ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

2 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement