ದೀವಗಿ ಬಳಿ ಬೈಕ್‌-ಲಾರಿ ಡಿಕ್ಕಿ: ಒಬ್ಬ ಸಾವು, ಇನ್ನೊಬ್ಬನಿಗೆ ಗಾಯ

ಕುಮಟಾ : ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೀವಗಿ ಬಳಿ ಬೈಕ್ ಹಾಗೂ ಮೀನು ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರು ವಿದ್ಯಾರ್ಥಿಗಳೆಂದು ಹೇಳಲಾಗಿದ್ದು, ಬೈಕ್ ಸವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಒಯ್ಯಲಾಗಿದೆ. ವಿದ್ಯಾರ್ಥಿಗಳ ಬಗಗೆ ಹೆಚ್ಚಿನ ವಿವರ ಲಭ್ಯವಾಗಬೇಕಿದೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement