ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ನಡೆದ ಮೂರು ಪ್ರತ್ಯೇಕ ಘಟನೆಯಲ್ಲಿ ಭದ್ರತಾ ಪಡೆಗಳು ಐವರು ಉಗ್ರರನ್ನು ಹತ್ಯೆ ಮಾಡಿದೆ. ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಈ ಎನ್ ಕೌಂಟರ್ ಗಳು ನಡೆದಿದೆ ಎಂದು ವರದಿಯಾಗಿದೆ.
ಕುಲ್ಗಾಮ್ ಜೊದಾರ್ ಪ್ರದೇಶದಲ್ಲಿ ಉಗ್ರರಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿದೆ. ಉಗ್ರರು ಗುಂಡು ಹಾರಿದ ಬಳಿಕ ಸೇನೆ ಪ್ರತಿದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಲಷ್ಕರ್ ಎ ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಪುಲ್ವಾಮಾದಲ್ಲಿ ಸೇನಯು ನಡೆಸಿದ ನಡೆದ ಮತ್ತೊಂದು ಗುಂಡಿನ ಕಾಳಗದಲ್ಲಿ ಇಬ್ಬರ ಭಯೋತ್ಪಾದಕರು ಸಾವಿಗೀಡಾಗಿದ್ದಾರೆ. ಅದಲ್ಲದೆ ಹಂದ್ವಾರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮತ್ತೊಬ್ಬನನ್ನು ಹತ್ಯೆ ಮಾಡಲಾಗಿದೆ. ಹಂದ್ವಾರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಹತ್ಯೆಯಾದ ಉಗ್ರನನ್ನು ಹಿಜ್ಬುಲ್ ಉಗ್ರ ಸಂಘಟನೆಯ ಮೆಹ್ರಾಜುದ್ದೀನ್ ಹಲ್ವಾಯಿ ಅಲಿಯಾಸ್ ಉಬೈದ್ ಎಂದು ಗುರುತಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ