ವಿಧಾನಸೌಧ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂದೆ ಬುಧವಾರ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಸಾಲದ ಬಾಕಿ ವಸೂಲಿಗಾಗಿ ತಮ್ಮ ಮನೆಯನ್ನು ಬ್ಯಾಂಕ್ ಹರಾಜು ಮಾಡಿದ್ದರಿಂದ ಅಸಮಾಧಾನಗೊಂಡ ದಂಪತಿ ಹತಾಶರಾಗಿ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರು.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ವಿಧಾನಸೌಧದ ಹೊರಗೆ ಆಗಮಿಸಿದ್ದರು. ಈ ವೇಳೆ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡರು. ಆದರೆ, ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ದುರಂತವನ್ನು ತಪ್ಪಿಸಿದರು, ಕುಟುಂಬ ಸದಸ್ಯರನ್ನು ತಕ್ಷಣ ಬಂಧಿಸಲಾಯಿತು.
ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕುಟುಂಬವನ್ನು ಪೊಲೀಸ್ ವಾಹನಗಳಲ್ಲಿ ಕರೆದೊಯ್ಯುತ್ತಿರುವುದನ್ನು ತೋರಿಸಿದೆ.
2016ರಲ್ಲಿ ಬೆಂಗಳೂರು ಸಿಟಿ ಕೋಆಪರೇಟಿವ್ ಬ್ಯಾಂಕ್‌ನಲ್ಲಿ ಶುಂಠಿ ಕೃಷಿ ಉದ್ಯಮ ಆರಂಭಿಸಲು 50 ಲಕ್ಷ ಸಾಲ ಮಾಡಿದ್ದೆವು ಎಂದು ಕುಟುಂಬದವರು ತಮ್ಮ ಸಂಕಷ್ಟ ಹಂಚಿಕೊಂಡಿದ್ದಾರೆ.

ಕುಟುಂಬವು ಎಎಂಐ (EMI)ಗಳನ್ನು ಮರುಪಾವತಿಸಲು ವಿಫಲವಾದ ಕಾರಣ, ಬಾಕಿಯನ್ನು ಮರುಪಾವತಿಸಲು ಬ್ಯಾಂಕ್ ಅವರ ಮನೆಯನ್ನು ಹರಾಜು ಹಾಕಲು ಮುಂದಾದ ನಂತರ ಕುಟುಂಬ ಆತ್ಮಹತ್ಯೆ ಯತ್ನಕ್ಕೆ ಮುಂದಾಯಿತು. 3 ಕೋಟಿ ಮೌಲ್ಯದ ಕುಟುಂಬದ ನಿವಾಸವನ್ನು ಕೇವಲ 1.41 ಕೋಟಿ ರೂ.ಗೆ ಬ್ಯಾಂಕ್ ಅಧಿಕಾರಿಗಳು ಹರಾಜು ಹಾಕಿದರು ಎಂದು ಆರೋಪಿಸಲಾಗಿದೆ.
ಕುಟುಂಬದ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಎರಡು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಕಳೆದ ಎರಡು ವರ್ಷಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ (zameer ahmed khan) ಅವರ ಮನೆಗೆ ಅಲೆಯುತ್ತಿದ್ದೇವೆ. ನಮಗೆ ಜಮೀರ್ ಅವರು ನ್ಯಾಯ ಕೊಡಿಸಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

2016ರಲ್ಲಿ ಶುಂಠಿ ಬೆಳೆಯಲು ಬೆಂಗಳೂರು ಕೋ ಆಪರೇಟೀವ್ ಬ್ಯಾಂಕ್ ನಿಂದ 50 ಲಕ್ಷ ರೂ. ಸಾಲ ಪಡೆದುಕೊಂಡಿದ್ದೆವು. ಈ ವರೆಗೆ ಬಡ್ಡಿ ಸೇರಿ 90 ಲಕ್ಷ ರೂ. ಮರುಪಾವತಿಸಿದ್ದೇವೆ. ಆರ್ಥಿಕ ಸಮಸ್ಯೆಯಾಗುತ್ತಿದ್ದ ಕಾರಣ ಬಡ್ಡಿ ದರ ಕಡಿಮೆ ಮಾಡಿಸಿಕೊಡುವಂತೆ ಸಚಿವ ಜಮೀರ್ ಅಹ್ಮರ್ ಅವರ ಬಳಿ ಹೋಗಿದ್ದೆವು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಬ್ಯಾಂಕ್‌ನಿಂದ ನಮಗೆ ಸೇರಿದ್ದ 3 ಕೋಟಿ ರೂ. ಮೌಲ್ಯದ ಬಿಲ್ಡಿಂಗ್ ಅನ್ನು 1.41 ಕೋಟಿ ರೂ.ಗಳಿಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಶಾಯಿಸ್ತಾ ದಂಪತಿ ಪ್ರತಿಭಟಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement