ಟಿಪ್ಪರ್ – ಕಾರಿನ ನಡುವೆ ಡಿಕ್ಕಿ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಸಾವು

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸಾವಿಗೀಡಾದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ, ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ.
ಟಿಪ್ಪರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ನಂತರ ಎರಡೂ ವಾಹನಗಳು ರಸ್ತೆ ಬದಿ ಪಲ್ಟಿಯಾಗಿವೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಶವಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement