ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್‌ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್‌ ಪೀಸ್‌ ಆದ ಘಟನೆ ನಡೆದಿದೆ.
ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ ಶನಿವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದೆ.ಟೆಂಪೋ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕ್ಯಾಬಿನ್‌ ತುಂಡಾಗಿ ಮೇಲು ಸೇತುವೆಯಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

ಸರಕು ಸಾಗಣೆ ವಾಹನವೊಂದು ಮಧ್ಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಮೂವರು ತೀವ್ರ ಗಾಯಗೊಂಡಿದ್ದಾರೆ. ಟೆಂಪೊ ಬ್ಯಾಡರಹಳ್ಳಿಯಿಂದ ನೈಸ್ ರಸ್ತೆ ಮೂಲಕ ಕೆಂಗೇರಿಗೆ ಹೋಗುತ್ತಿದ್ದರು. ಆಗ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಟೆಂಪೊ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದಾಗಿ ವಾಹನದ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ವೇಗವಾಗಿ ಬಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಪರಿಣಾಮ ವಾಹನ ಎರಡು ಭಾಗಗಳಾಗಿ ತುಂಡಾಗಿದೆ. ಮತ್ತು ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ದಾರಿಹೋಕರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲಿಸಿದ್ದು, ಚಾಲಕನ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಟೆಂಪೋ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಜ್ಞಾನಭಾರತಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement