ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕು: ಹವಾಮಾನ ಇಲಾಖೆ

ಬೆಂಗಳೂರು: ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈವರೆಗೆ ಉತ್ತಮ ಮಳೆಯಾಗಿಲ್ಲ. ಆದರೆ ಮುಂದಿನ ನಾಲ್ಕೈದು ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಚುರುಕಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
ಪಶ್ಚಿಮ ಘಟ್ಟ – ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ. ಜುಲೈ ಎರಡನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯಲಿದೆ. ಆಗ ದೇಶಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ವರ್ಷ ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೇಂದ್ರ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತ ಪೂರ್ವ ಭಾಗದಲ್ಲಿ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮುಂಗಾರಿನ ಕಾಲಾವಧಿಯಲ್ಲಿ(ಜೂನ್‌ನಿಂದ-ಸೆಪ್ಟೆಂಬರ್) ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಗುರುವಾರ(ಜುಲೈ 8)ದಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವಮಳೆ ಜೋರಾಗಲಿದೆ. ಕರಾವಳಿಯಲ್ಲಿ ಎರಡು ದಿನಗಳ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ನೈರುತ್ಯ ಮುಂಗಾರಿನಲ್ಲಿ ಈ ಭಾಗಕ್ಕೆ ಇಂದಿನಿಂದ (ಜುಲೈ 8ರ ನಂತರ) ಉತ್ತಮ ಮಳೆಯಾಗಲಿದೆ ಎನ್ನಲಾಗುತ್ತಿದೆ.
ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement