ಬೆಳಗಾವಿ : ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೂರು ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತರನ್ನು ಫಕ್ಕೀರಪ್ಪ ಸಿದ್ದಪ್ಪ ಚಂದರಗಿ(54) ಮತ್ತು ಮಹದೇವ ದುರ್ಗಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಗ್ರಾಮಸ್ಥರು ಹೆಸ್ಕಾಂ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಸವದತ್ತಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ