ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ದೆಹಲಿಯಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಯ ಗ್ಯಾಸ್ಟ್ರೋ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದೆ.
ಈ ತಿಂಗಳಲ್ಲಿ 78 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಅಧಿಕೃತ ಹೇಳಿಕೆಯ ಪ್ರಕಾರ, ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಆರೈಕೆಯಲ್ಲಿದ್ದಾರೆ.
ಫೆಬ್ರವರಿಯಲ್ಲಿಯೂ ಸಹ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಸಮಸ್ಯೆಯಿಂದಾಗಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಜೂನ್ 7 ರಂದು ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ನಿಯಮಿತ ತಪಾಸಣೆಗಾಗಿ ದಾಖಲಿಸಲಾಗಿತ್ತು.
.
ನಿಮ್ಮ ಕಾಮೆಂಟ್ ಬರೆಯಿರಿ