ಕಿರುತೆರೆ ನಟಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು, 10 ವರ್ಷದ ಸೋದರಳಿಯನಿಗೆ ಗಾಯ

ಕಾಶ್ಮೀರ: ಬುಧವಾರ (ಮೇ 25) ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡಿಗೆ ಕಿರುತೆರೆ ನಟಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಅವರ ಸೋದರಳಿಯ ಕೂಡ ಗಾಯಗೊಂಡಿದ್ದಾನೆ.
ಹಿಸ್ರೂ ಚದೂರದಲ್ಲಿರುವ ಅವರ ನಿವಾಸದ ಹೊರಗೆ ಭಯೋತ್ಪಾದಕರು ನಟಿ ಅಮ್ರೀನ್ ಭಟ್ ಮತ್ತು ಅವರ 10 ವರ್ಷದ ಸೋದರಳಿಯನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಕ್ಷಣ ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಅಮ್ರೀನ್ ಭಟ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಅವರ ಸೋದರಳಿಯ ತೋಳಿಗೆ ಗುಂಡು ತಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಶ್ಮೀರ ಪೊಲೀಸರ ಪ್ರಕಾರ, ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಮೂವರು ಭಯೋತ್ಪಾದಕರು ಘಟನೆಯಲ್ಲಿ ಭಾಗಿಯಾಗಿದ್ದಾರೆ.
“ಬುದ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯನ್ನು ಖಂಡಿಸಲು ಯಾವುದೇ ಪದಗಳಿಲ್ಲ. ಅಮ್ರೀನ್‌ ಭಟ್ ಅವರ ಕುಟುಂಬಕ್ಕೆ ತೀವ್ರ ಸಂತಾಪಗಳು ಮತ್ತು ಗಾಯಗೊಂಡ ಅವರ ಸೋದರಳಿಯ ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥನೆಗಳು” ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.ಇಡೀ ಪ್ರದೇಶವನ್ನು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement