ಇಂದಿನಿಂದ ಸಂಸತ್ ಅಧಿವೇಶನ: ಬೆಲೆ ಏರಿಕೆ, ಕೋವಿಡ್ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷಗಳ ಸಜ್ಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ.
ಸರ್ಕಾರವು 17 ವಿಧೇಯಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದು, ಇದರಲ್ಲಿ 3 ಸುಗ್ರೀವಾಜ್ಞೆ ಕೂಡ ಸೇರಿವೆ ಎಂದು ತಿಳಿದುಬಂದಿದೆ.
ಶಸ್ತ್ರಾಸ್ತ್ರ ಉತ್ಪಾದಿಸುವ ಕಾರ್ಖಾನೆಗಳ ನೌಕರರು ಮುಷ್ಕರ ನಡೆಸುವಂತಿಲ್ಲ ಎಂದು ನಿರ್ಬಂಧ ವಿಧಿಸುವ ಸುಗ್ರೀವಾಜ್ಞೆಯ ಇವುಗಳಲ್ಲಿ ಸೇರಿವೆ ಎನ್ನಲಾಗಿದೆ. ದೆಹಲಿ ವಾಯುಗುಣಮಟ್ಟ ಕಾಯುವ ಸುಗ್ರೀವಾಜ್ಞೆ ಕೂಡ ಇದರಲ್ಲಿ ಸೇರಿದೆ. ಆದರೆ, ಆಗಸ್ಟ್ 13ರಂದು ಮುಗಿಯಲಿರುವ ಈ ಅಧಿವೇಶನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 100 ರೂ.ಗಳ ಗಡಿ ದಾಟಿರುವುದು ಪ್ರಮುಖ ವಿಷಯವಾಗುವ ಸಾಧ್ಯತೆಗಳಿವೆ. ಇದನ್ನು ಪ್ರಮುಖವಾಗಿ ಪ್ರಸ್ತಾಪಿಸಲು ಪ್ರತಿಪಕ್ಷಗಳು ತೀರ್ಮಾನಿಸಿದೆ.
ಕೋವಿಡ್ 2ನೇ ಅಲೆ ವೇಳೆ ಅಪಾರ ಸಾವು ನೋವು ಸಂಭವಿಸಿದ್ದು, ಇದಕ್ಕೆ ಸರ್ಕಾರದ ಆರೋಗ್ಯ ವ್ಯವಸ್ಥೆ ವೈಫಲ್ಯದ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಲಿವೆ. ಇದೂ ಕೂಡ ಪ್ರಮುಖ ಚರ್ಚಾ ವಿಷಯವಾಗುವ ಸಾಧ್ಯತೆ ದಟ್ಟವಾಗಿದೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement