
ಧಾರವಾಡ: ಇಬ್ಬರು ಬಾಲಕರು ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕರನ್ನು ಕುಮಾರ ನಿಂಗಪ್ಪ ಮುದಕಣ್ಣವರ (7) ಮತ್ತು ಪ್ರಥಮ ಸುರೇಶ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ ಉಳ್ಳಾಗಡ್ಡಿ ಎಂಬಾತ ಧಾರವಾಡದ ಸತ್ತೂರಿನವನು. ರಜೆ ಇದ್ದಿದ್ದರಿಂದ ಮನಸೂರಿಗೆ ಬಂದಿದ್ದ ಎನ್ನಲಾಗಿದೆ. ಇವರಿಬ್ಬರು ಬುಧವಾರ (ಮೇ 6) ಸಂಜೆ ಆಟ ಆಡಲು ಹೊರಹೋಗಿದ್ದರು. ಈ ವೇಳೆ ನೀರಿನ ಗುಂಡಿಯಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ. ರಾತ್ರಿಯಾದರೂ ಇವರು ಮನೆಗೆ ಬಾರದೇ ಇದ್ದಾಗ ಮನೆಯವರು ಹುಕಾಟ ನಡೆಸಲಾಯಿತು. ಅದೇ ಊರಿನಲ್ಲಿ ವ್ಯಕ್ತಿಯೊಬ್ಬರು ಮನೆ ಕಟ್ಟಲು ಗುಂಡಿ ತೋಡಿದ್ದರು. ಅದರಲ್ಲಿ ಈ ಬಾಲಕರು ಬಿದ್ದಿರುವುದು ಗೊತ್ತಾಗಿದೆ.
ಇಬ್ಬರು ಬಾಲಕರ ಮೃತದೇಹವನ್ನು ಗ್ರಾಮಸ್ಥರು ಹೊರತೆಗೆದಿದರು. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಬೇಟಿ ನೀಡಿದ್ದಾರೆ. ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



ನಿಮ್ಮ ಕಾಮೆಂಟ್ ಬರೆಯಿರಿ