ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಿದೆ. ಬಿಜೆಪಿ ನಾಯಕ ಎ ನಾರಾಯಣಸ್ವಾಮಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ.
ಜೆಡಿಎಸ್‌ ಜೊತೆಗಿನ ಮೈತ್ರಿಯ ಸೀಟು ಹಂಚಿಕೆಯ ಸೂತ್ರದಡಿ 25 ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದವು. 24 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದ ಬಿಜೆಪಿ, ಚಿತ್ರದುರ್ಗ ಮೀಸಲು ಕ್ಷೇತ್ರದ ಟಿಕೆಟ್‌ ಘೋಷಿಸಿರಲಿಲ್ಲ.

ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ವಿ.ನಾರಾಯಣಸ್ವಾಮಿ ಅವರು ಸಕ್ರಿಯ ರಾಜಕಾರಣದ ಕುರಿತು ಅವರು ತೋರಿದ ನಿರಾಸಕ್ತಿಯ ಕಾರಣಕ್ಕೆ ಮಾಜಿ ಸಂಸದ ಜನಾರ್ದನ ಸ್ವಾಮಿ ಸೇರಿದಂತೆ ಹಲವರು ಟಿಕೆಟ್‌ ಪಡೆಯಲು ಪ್ರಯತ್ನಿಸಿದ್ದರು. ಆದರೆ ಜಾತಿ ಸಮೀಕರಣದ ಲೆಕ್ಕಾಚಾರದಲ್ಲಿ ಪರಿಶಿಷ್ಟ ಜಾತಿಯ ಮೀಲು ಕ್ಷೇತ್ರವಾದ ಇಲ್ಲಿ ಎಡಗೈ ಸಮುದಾಯಕ್ಕೆ ಬಿಜೆಪಿ ಮಣೆ ಹಾಕಿದೆ.
ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಮೀಸಲು (SC) ಸ್ಥಾನದಿಂದ ನವನೀತ ರಾಣಾ ಅವರನ್ನು ಕಣಕ್ಕಿಳಿಸಿದೆ.
ನವನೀತ್ ರಾಣಾ ಅಮರಾವತಿ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬೆಂಬಲದೊಂದಿಗೆ ಶಿವಸೇನೆಯ ಆನಂದರಾವ್ ಅಡ್ಸುಲ್ ಅವರನ್ನು ಸೋಲಿಸಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement