ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಕೆಲವೊಂದು ಸ್ಪಷ್ಟನೆ ಕೇಳಿ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಅವರು ಕೋರಿರುವ ಸ್ಪಷ್ಟನೆಗಳ ಬಗ್ಗೆ ವಿವರ ನೀಡಿ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
2023ರ ಆಗಸ್ಟ್ ನಿಂದ ಈವರೆಗೆ 119 ಮಸೂದೆಗಳಿಗೆ ಅಂಗೀಕಾರ ನೀಡಲಾಗಿದೆ. ಈ ಪೈಕಿ 83 ಮಸೂದೆಗಳನ್ನು ಕಾಯ್ದೆಯಾಗಿ ಜಾರಿಗೊಳಿಸಲಾಗಿದೆ. ನಾಲ್ಕು ಮಸೂದೆಗಳು ರಾಜ್ಯಪಾಲರ ಬಳಿ ಇವೆ. ಏಳು ಮಸೂದೆಗಳ ಕುರಿತು ಸ್ಪಷ್ಟಿಕರಣ ಕೇಳಿದ್ದಾರೆ. ಐದು ಮಸೂದೆಗಳನ್ನು ರಾಷ್ಟ್ರಪತಿಯವರಿಗೆ ಕಳುಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ