ಮಹಾರಾಷ್ಟ್ರದಲ್ಲಿ ದೈನಂದಿನ ಕೊರೊನಾ ಪ್ರಕರಣ 25,681

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಬರೋಬ್ಬರಿ 25,681 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 24,22,021ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ 70 ಮಂದಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಮೊದಲ ಕೋವಿಡ್-19 ಪ್ರಕರಣ ವರದಿಯಾಗಿತ್ತು. ನಂತರ ದೈನಂದಿನ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗಲು ಆರಂಭಿಸಿತ್ತು ಮತ್ತು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಒಂದೇ ದಿನ 24,896 ಪ್ರಕರಣಗಳು ವರದಿಯಾಗಿದ್ದವು. ನಂತರ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಯಾಗಿತ್ತು.ಈಗ ಮತ್ತೆ ಏರಿಕೆಯಾಗಲು ಆರಂಭಿಸಿವೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ 6 ಚರಣದ ಗಾಯನವಿಲ್ಲ ; 2 ಚರಣ ಮಾತ್ರ ಹಾಡಲು ಆದೇಶ

ನಿಮ್ಮ ಕಾಮೆಂಟ್ ಬರೆಯಿರಿ

advertisement